ಮುಸ್ಲಿಮರಿಗೆ ಬೆದರಿಕೆಯೊಡ್ಡಿದ ಮೇನಕಾ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ

Update: 2019-04-12 18:14 GMT

ಸುಲ್ತಾನ್ ಪುರ, ಎ.12: ತನಗೆ ಮತ ನೀಡದಿದ್ದರೆ ನಿಮ್ಮ ಕೆಲಸಗಳನ್ನು ಮಾಡುವುದಿಲ್ಲ ಎಂದು ಮುಸ್ಲಿಮರನ್ನು ಬೆದರಿಸಿದ ಬಿಜೆಪಿ ನಾಯಕಿ ಮೇನಕಾ ಗಾಂಧಿಯವರಿಗೆ ಸುಲ್ತಾನ್ ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

“ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಿದೆ. ಸುಲ್ತಾನ್ ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ವಿರುದ್ಧ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ವರದಿಯೊಂದನ್ನು ರವಾನಿಸಲಾಗಿದೆ” ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಬಿ.ಆರ್. ತಿವಾರಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News