ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Update: 2019-04-12 17:39 GMT

ವಿಜಯಪುರ,ಎ.12: ಬೆಳಗಾವಿ ಜಿಲ್ಲೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿ ಶಾಸಕಿ ಸೇರಿದಂತೆ ಮೂವರು ಗಾಯಗೊಂಡ ಘಟನೆ ಸೊಲ್ಲಾಪುರ ಬಳಿ ಸಂಭವಿಸಿದೆ. 

ಅಪಘಾತದಿಂದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಕಾರಿನಲ್ಲಿ ಮಹಾರಾಷ್ಟ್ರಕ್ಕೆ ಹೊರಟಿದ್ದ ವೇಳೆ ಎದುರಿಗೆ ಬರುತ್ತಿದ್ದ ವಾಹನ ಮುಖಾಮುಖಿ ಢಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದಾಗ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಗಾಯಗೊಂಡ ಶಾಸಕಿ‌ ಅಂಜಲಿ, ಅವರ ಅಂಗರಕ್ಷಕ ಹಾಗೂ ಚಾಲಕನನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಸೊಲ್ಲಾಪುರ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News