ಬೆಂಗಳೂರಿನ 3 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು: ಎಸ್.ಎಂ.ಕೃಷ್ಣ

Update: 2019-04-12 17:42 GMT

ಬೆಂಗಳೂರು, ಎ.12: ಬೆಂಗಳೂರು ಉತ್ತರ, ಕೇಂದ್ರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.

ಶುಕ್ರವಾರ ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸಿದ ಅವರು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವಿನ ವಾತಾವರಣ ನಿರ್ಮಾಣವಾಗಿದೆ ಎಂದರು.

ಮತದಾನಕ್ಕೆ ಅರ್ಹತೆ ಇರುವ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು. ಹೆಚ್ಚು ಮತದಾರರು ಮತಗಟ್ಟೆಗೆ ಹೋದರೆ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮತದಾನದ ಪ್ರಮಾಣವನ್ನು ಹೆಚ್ಚಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕ ಆರ್.ಅಶೋಕ್, ವಿ.ಸೋಮಣ್ಣ, ಆರ್.ದೇವೇಗೌಡ, ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ, ಮಾಜಿ ಮೇಯರ್ ಶಾಂತಕುಮಾರಿ, ಬಿಬಿಎಂಪಿ ಬಿಜೆಪಿ ಸದಸ್ಯರು, ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News