ರಾಜಸ್ಥಾನ ವಿರುದ್ಧ ಪಂದ್ಯಕ್ಕೆ ರೋಹಿತ್ ಲಭ್ಯ

Update: 2019-04-12 18:40 GMT

  ಮುಂಬೈ, ಎ.12: ರಾಜಸ್ಥಾನ ರಾಯಲ್ಸ್ ವಿರುದ್ಧ ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಲಭ್ಯವಿರಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಕ್ರಿಕೆಟ್ ಚಟುವಟಿಕೆಗಳ ನಿರ್ದೇಶಕ ಝಹೀರ್ ಖಾನ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಕಾಲು ನೋವಿನಿಂದಾಗಿ ರೋಹಿತ್ ಬುಧವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಆಡಿರಲಿಲ್ಲ. ಕಳೆದ 11 ಆವೃತ್ತಿಯ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿ ಐಪಿಎಲ್ ಪಂದ್ಯವನ್ನು ರೋಹಿತ್ ತಪ್ಪಿಸಿಕೊಂಡಿದ್ದರು.

ರೋಹಿತ್ ಅಭ್ಯಾಸ ನಡೆಸುತ್ತಿದ್ದಾಗ ಗಾಯಗೊಂಡಿದ್ದರು. ರೋಹಿತ್‌ರ ಗಾಯದ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಝಹೀರ್, ‘‘ಅವರು ಖಂಡಿತವಾಗಿಯೂ ರಾಜಸ್ಥಾನ ಎದುರಿನ ಪಂದ್ಯಕ್ಕೆ ಲಭ್ಯವಿರಲಿದ್ದಾರೆ. ಅವರು ಸಂಪೂರ್ಣ ಆತ್ಮವಿಶ್ವಾಸದಲ್ಲಿದ್ದು, ಅದು ನಮಗೆ ಧನಾತ್ಮಕ ಅಂಶವಾಗಿದೆ. ರೋಹಿತ್ ಇಂದು ಪ್ರಾಕ್ಟೀಸ್‌ನಲ್ಲಿ ಭಾಗಿಯಾಗಿದ್ದಾರೆ. ಅವರು ರಾಜಸ್ಥಾನ ವಿರುದ್ಧ ಪಂದ್ಯದಲ್ಲಿ ಆಡುವ ವಿಶ್ವಾಸವಿದೆ’’ ಎಂದು ಭಾರತದ ಮಾಜಿ ವೇಗದ ಬೌಲರ್ ಝಹೀರ್ ಹೇಳಿದ್ದಾರೆ. ರೋಹಿತ್ ಶುಕ್ರವಾರ ವಾಂಖೆಡೆ ಸ್ಟೇಡಿಯಂ ನಲ್ಲಿ ಸ್ವಲ್ಪ ಸಮಯ ಬ್ಯಾಟಿಂಗ್ ಪ್ರಾಕ್ಟೀಸ್ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News