ಚುನಾವಣಾ ಆಯೋಗಕ್ಕೆ ದೂರು ನೀಡಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

Update: 2019-04-13 09:22 GMT

ಹೊಸದಿಲ್ಲಿ, ಎ.13: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶನಿವಾರ ಬೆಳಗ್ಗೆ ದಿಲ್ಲಿಗೆ ಧಾವಿಸಿ ಬಂದು ತನ್ನ ರಾಜ್ಯದಲ್ಲಿ ಗುರುವಾರ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ 30ರಿಂದ 40 ಶೇ. ಇವಿಎಂ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿರಲಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣಾ ಕಾವಲು ಸಂಸ್ಥೆಯಿಂದ ಸರಿಯಾದ ಪ್ರತಿಕ್ರಿಯೆ ಬಾರದೇ ಇದ್ದರೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.

"ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆ.  ಅದು ಮೋದಿ ನೇತೃತ್ವದ ಕೇಂದ್ರ ಸರಕಾರದ ಆಣತಿಯಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ನಾಯ್ಡು, ಇವಿಎಂ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಸುಮಾರು 150 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಆಗ್ರಹಿಸಿದರು.

ಗುರುವಾರ ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರ ಹಾಗೂ 175 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಮತದಾನ ನಡೆದಿದ್ದು ಎಲ್ಲೆಡೆ ಇವಿಎಂ ಯಂತ್ರಗಳು ದೋಷಪೂರಿತವಾಗಿದ್ದವು. ಹೀಗಾಗಿ ಚುನಾವಣೆ ಸಮಯವನ್ನು ವಿಸ್ತರಿಸಲಾಗಿತ್ತು. ಕಳೆದ ಬಾರಿ 78.8 ಶೇ. ಮತದಾನವಾಗಿದ್ದು, ಈ ಬಾರಿ 66 ಶೇ. ಮತದಾನವಾಗಿದೆ.

ಚುನಾವಣೆಯನ್ನು ದೊಡ್ಡ ಪ್ರಹಸನವಾಗಿ ಪರಿವರ್ತಿಸಲಾಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾಯ್ಡು, ಅಧಿಕೃತ ಮಾಹಿತಿ ಪ್ರಕಾರ 4,583 ಇವಿಎಂ ಯಂತ್ರಗಳಲ್ಲಿ ದೋಷ ಕಂಡುಬಂದಿದೆ. ಇದೊಂದು ಗಂಭೀರ ಸಮಸ್ಯೆಯಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News