ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಮುಖ್ಯಮಂತ್ರಿ ಕುಮಾರಸ್ವಾಮಿ ಶುಭಾಶಯ

Update: 2019-04-13 17:20 GMT

ಬೆಂಗಳೂರು, ಎ. 13: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಸಮಸ್ತ ಜನತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿದ್ದಾರೆ.

ಅತ್ಯಂತ ಉನ್ನತ ಧ್ಯೇಯೋದ್ದೇಶಗಳನ್ನೊಳಗೊಂಡ ಸಂವಿಧಾನ ರಚಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟವರು ಡಾ.ಬಿ.ಆರ್. ಅಂಬೇಡ್ಕರ್ ಅವರು. ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಲು ಯತ್ನಿಸುವುದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News