ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಲಾರಿ: ಚಾಲಕ ಸ್ಥಳದಲ್ಲೇ ಮೃತ್ಯು

Update: 2019-04-14 12:20 GMT

ಬೆಂಗಳೂರು, ಎ.14: ತರಕಾರಿ ಸಾಗಿಸುತ್ತಿದ್ದ ಲಾರಿಯೊಂದು ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಉಲ್ಲಾಳದಲ್ಲಿ ವಾಸವಾಗಿದ್ದ ಶ್ರೀನಿವಾಸರಾವ್(23) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದು, ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ರವಿವಾರ ಮುಂಜಾನೆ ಯಶವಂತಪುರ ಮೇಲ್ಸುತುವೆ ಮೇಲೆ ವಾಹನ ಚಲಾಯಿಸಿಕೊಂಡು ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕೆಳಗೆ ಉರುಳಿ ಬಿದ್ದಿದೆ. ಶ್ರೀನಿವಾಸರಾವ್ ಈ ವೇಳೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಚಾಲಕನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಿಸಲಾಗಿದೆ. ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News