ನಾಳೆ ಪಿಯುಸಿ ಫಲಿತಾಂಶ ಪ್ರಕಟ

Update: 2019-04-15 06:30 GMT

ಬೆಂಗಳೂರು, ಎ.14: ದ್ವಿತೀಯ ಪಿಯುಸಿ ಫಲಿತಾಂಶವು ನಾಳೆ (ಸೋಮವಾರ) ಬೆಳಗ್ಗೆ 12 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ಮಾ.1ರಿಂದ 18ರ ವರೆಗೆ ನಡೆಸಲಾಗಿರುವ 2019ನೆ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಇಲಾಖೆ ನಿರ್ದೇಶಕಿ ಸಿ. ಶಿಖಾ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅನಂತರ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಇಲಾಖೆ pue.kar.nic.in ವೆಬ್‌ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ 12ಗೆ ವೆಬ್‌ಸೈಟ್‌ನಲ್ಲಿ ಮತ್ತು ಎ.16ರಂದು ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶ ವೀಕ್ಷಿಸಬಹುದು. ಎ.29 ಮತ್ತು 30 ರಂದು ವಿವಿಧ ವೃತ್ತಿಪರ ಕೋರ್ಸ್‌ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. 15 ದಿನಗಳ ಮೊದಲೇ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ನಿರಾಳವಾಗಿ ಸಿಇಟಿ ಬರೆಯಬಹುದಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News