ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

Update: 2019-04-15 07:21 GMT

ಹೊಸದಿಲ್ಲಿ, ಎ.15: ರಫೇಲ್ ಒಪ್ಪಂದ ಪ್ರಕರಣದಲ್ಲಿ ಚೌಕೀದಾರ್ ಮೋದಿ `ಚೋರ್' ಆಗಿದ್ದಾರೆಂದು ಸುಪ್ರೀಂ ಕೋರ್ಟ್ ಹೇಳಿದೆಯೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ನೀಡಿರುವ ಹೇಳಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆವರಿಗೆ ನೋಟಿಸ್ ಜಾರಿಗೊಳಿಸಿದೆ.

ಎಪ್ರಿಲ್ 22ರೊಳಗಡೆ ಪ್ರತಿಕ್ರಿಯಿಸುವಂತೆ ನ್ಯಾಯಾಲಯ ರಾಹುಲ್ ಗೆ ಸೂಚಿಸಿದೆ. ಬಿಜೆಪಿಯ ಮೀನಾಕ್ಷಿ ಲೇಖಿ ಅವರು ದಾಖಲಿಸಿರುವ ನ್ಯಾಯಾಂಗ ನಿಂದನೆ ಪ್ರಕರಣ ಕುರಿತಂತೆ ಈ ನೋಟಿಸ್ ಜಾರಿಗೊಳಿಸಲಾಗಿದೆ.

ರಾಹುಲ್ ಗಾಂಧಿ ತಮ್ಮ ಹೇಳಿಕೆ ಮೂಲಕ ಸುಪ್ರೀಂ ಕೋರ್ಟ್ ಹಾಗೆ ಹೇಳಿದೆಯೆಣದಯ ತಪ್ಪಾಗಿ ತಿಳಿಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅಟಾರ್ನಿ ಜನರಲ್ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದ ರಫೇಲ್ ಒಪ್ಪಂದದ ಕುರಿತಾದ ಕೆಲವೊಂದು ದಾಖಲೆಗಳ ವಿಚಾರದ  ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದ್ದುದರಿಂದ ಪ್ರಧಾನಿ ಮೋದಿಯ ಬಗ್ಗೆ ಏನನ್ನೂ ಹೇಳಿಕೊಳ್ಳಲು ಆ ಸಂದರ್ಭ ಆಸ್ಪದವಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಆದೇಶದಂತೆ ತೋರ್ಪಡಿಸಲು ಯತ್ನಿಸಿದ್ದಾರೆಂದು” ಅಪೀಲುದಾರೆ ಬಿಜೆಪಿಯ ಮೀನಾಕ್ಷಿ ಲೇಖಿ ಆರೋಪಿಸಿದ್ದರು. ಅವರು ತಮ್ಮ ಅಪೀಲನ್ನು ಹಿರಿಯ ವಕೀಲ ಮುಕುಲ್ ರೋಹಟ್ಗಿ ಮೂಲಕ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News