ಮೈಸೂರಿನಲ್ಲಿ ಈ ಬಾರಿ ಗೆಲುವು ನಮ್ಮದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2019-04-15 18:33 IST
ಬೆಂಗಳೂರು, ಎ. 15: ‘ಸಂಸದ ಪ್ರತಾಪ್ ಸಿಂಹ ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು ಕೇವಲ ಗಲಭೆ, ಭಾಷಣಗಳಲ್ಲೆ ಐದು ವರ್ಷ ಪೂರೈಸಿದ್ದು, ಇದರಿಂದ ಜನ ನೊಂದಿದ್ದಾರೆ. ಹೀಗಾಗಿ ಈ ಬಾರಿ ಗೆಲುವು ನಮ್ಮದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿದ್ದ ಚುನಾವಣಾ ಜಂಟಿ ಪ್ರಚಾರ ಸಭೆಗಳಲ್ಲಿ ಸಚಿವರಾದ ಜಿ.ಟಿ.ದೇವೇಗೌಡ ಅವರೊಂದಿಗೆ ಭಾಗವಹಿಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.