ದ್ವಿತೀಯ ಪಿಯುಸಿ ಫಲಿತಾಂಶ: ಕೊಡಗು ಜಿಲ್ಲೆಗೆ 3 ನೇ ಸ್ಥಾನ

Update: 2019-04-15 13:11 GMT

ಮಡಿಕೇರಿ,ಎ.15: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.83.31 ರಷ್ಟು ಫಲಿತಾಂಶ ಪಡೆದು ಕಳೆದ ಬಾರಿಯಂತೆ ಈ ಬಾರಿಯೂ ಮೂರನೇ ಸ್ಥಾನ ಪಡೆದಿದೆ. 

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 5,177 ವಿದ್ಯಾರ್ಥಿಗಳಲ್ಲಿ 4,318 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 1,258 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದರು, ಇವರಲ್ಲಿ 931 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.74ರಷ್ಟು ಫಲಿತಾಂಶ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 2,736 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 2,382 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87 ರಷ್ಟು  ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 1,183 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇವರಲ್ಲಿ 1,000 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.85 ರಷ್ಟು ಫಲಿತಾಂಶ ಬಂದಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News