ಬಿಜೆಪಿ ವಿರುದ್ಧ ಮತ ಚಲಾಯಿಸಲು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕರೆ

Update: 2019-04-15 17:15 GMT

ಉಡುಪಿ, ಎ.15: ನೋಟು ಅಮಾನ್ಯೀಕರಣ ಹಾಗೂ ಜಿಎಸ್‌ಟಿ ನೀತಿ ಗಳನ್ನು ಜಾರಿ ತಂದು ಕೋಟ್ಯಾಂತರ ಕಟ್ಟಡ ಕಾರ್ಮಿಕರನ್ನು ನಿರುದ್ಯೋಗಿಗಳ ನ್ನಾಗಿಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಲು ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿ(ಸಿಐಟಿಯು) ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕರೆ ನೀಡಿದೆ.

ಮೋದಿ ಸರಕಾರವು ದೇಶದ ಕಾರ್ಮಿಕ ವರ್ಗ ಸ್ವಾತಂತ್ರ್ಯ ಪೂರ್ವದಿಂದ ಹೋರಾಡಿ ತ್ಯಾಗ ಬಲಿದಾನದಿಂದ ಗಳಿಸಿದ್ದ 44 ಕಾರ್ಮಿಕರ ಕಾನೂನುಗಳನ್ನು ಮಾಲಕರ ಪರವಾಗಿ ತಿದ್ದುಪಡಿ ಮಾಡಲು ಮುಂದಾಗಿರುವುದು ಖಂಡ ನೀಯ. ಮೋದಿ ಸರಕಾರ ರೂಪಿಸಿದ್ದ ಮಸೂದೆ ಮುಂದೆ ಕಾಯ್ದೆಯಾಗಿ ಜಾರಿ ಯಾದರೆ 1996ರಲ್ಲಿ ಜಾರಿಯಾದ ಕಟ್ಟಡ ಕಾರ್ಮಿಕರ ಕಾನೂನು ಹಾಗೂ ಸೆಸ್ ಕಾನೂನುಗಳೆರಡು ರದ್ದಾಗುತ್ತವೆ. ಈಗಾಗಲೇ ನೊಂದಣೆಯಾಗಿ ರುವ ಗುರುತಿನ ಚೀಟಿಗಳು ರದ್ದಾಗುತ್ತದೆ.

ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಬ್ಬರೂ ಹೊಸ ರಾಜ್ಯ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಹೆಸರು ನೊಂದಾಯಿಸಿಕೊಳ್ಳಬೇಕು. ಆದರೆ ಈ ನೊಂದಣಿ ಕಡ್ಡಾಯವಿಲ್ಲ. ಅಸಂಘಟಿತ ವಲಯದ ಕಾರ್ಮಿಕರು 14ನೇ ವಯಸ್ಸಿನಿಂದ ನೊಂದಣಿ ಮಾಡಬಹುದು. ಇದರಿಂದ ಬಾಲ ಕಾರ್ಮಿಕ ಪದ್ದತಿಗೆ ಉತ್ತೇಜನ ನೀಡುತ್ತದೆ. ರಾಜ್ಯ ಕಲ್ಯಾಣ ಮಂಡಳಿ ಬರೀ ಸಲಹಾ ಮಂಡಳಿಯಾಗಿರುತ್ತದೆ.

ಈ ಹೋರಾಟದ ಮುಂದುವರೆದ ಭಾಗವಾಗಿಯೇ ಉಡುಪಿ-ಚಿಕ್ಕ ಮಗಳೂರು ಹಾಗು ಶಿವಮೊಗ್ಗ-ಬೈಂದೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಿ ಮೈತ್ರಿ ಕೂಟದ ಅಭ್ಯರ್ಥಿ ಗಳನ್ನು ಗೆಲ್ಲಿಸಲು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಹಾಗೂ ಕುಟುಂಬದ ಸದಸ್ಯರು ಶ್ರಮಿಸಬೇಕೆಂದು ಸಮಿತಿಯ ಸಂಚಾಲಕರಾದ ಶೇಖರ ಬಂಗೇರ ಹಾಗೂ ಸುರೇಶ್ ಲ್ಲಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News