ಟಿಕ್ ಟೋಕ್ ನಿಷೇಧ ರದ್ದುಗೊಳಿಸಲು ಸುಪ್ರೀಂ ನಿರಾಕರಣೆ

Update: 2019-04-15 17:20 GMT

ಹೊಸದಿಲ್ಲಿ, ಎ. 15: ಟಿಕ್ ಟೋಕ್ ಆ್ಯಪ್ ನಿಷೇಧಿಸುವಂತೆ ಮದ್ರಾಸ್ ಉಚ್ಚ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ನೀಡಿದ ನಿರ್ದೇಶನ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮದ್ರಾಸ್ ಉಚ್ಚ ನ್ಯಾಯಾಲಯದ ಆದೇಶ ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಇದು ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ. ಪ್ರಕರಣವನ್ನು ಎಪ್ರಿಲ್ 16ರಂದು ವಿಚಾರಣೆ ನಡೆಸಲು ಉಚ್ಚ ನ್ಯಾಯಾಲಯ ಪರಿಗಣಿಸಿದೆ ಎಂದು ಹೇಳಿದೆ.

 ಅಶ್ಲೀಲ ಹಾಗೂ ಅಸಭ್ಯ ಅಂಶಗಳು ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಆ್ಯಪ್ ಟಿಕ್‌ ಟೋಕ್‌ಗೆ ನಿಷೇಧ ಹೇರುವಂತೆ ಮದ್ರಾಸ್ ಉಚ್ಚ ನ್ಯಾಯಾಲಯ ಕೇಂದ್ರಕ್ಕೆ ಎಪ್ರಿಲ್ 3ರಂದು ಮಧ್ಯಂತರ ನಿರ್ದೇಶನ ನೀಡಿತ್ತು. ಅಲ್ಲದೆ ಟಿಕ್‌ಟೋಕ್ ವೀಡಿಯೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿತ್ತು.

 ಸಂಸ್ಕೃತಿಯನ್ನು ಕೆಳದರ್ಜೆಗೆ ಇಳಿಸುವ ಹಾಗೂ ಅಶ್ಲೀಲತೆಗೆ ಉತ್ತೇಜನ ನೀಡುತ್ತಿರುವ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾದ ಟಿಕ್ ಟೋಕ್ ಆ್ಯಪ್‌ಗೆ ನಿಷೇಧ ವಿಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ ಕುರಿತು ಉಚ್ಚ ನ್ಯಾಯಾಲಯ ಇತ್ತೀಚೆಗೆ ಮಧ್ಯಂತರ ಆದೇಶ ಜಾರಿ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News