×
Ad

ಬಿಎಂಟಿಸಿ ಬಸ್‌ಗಳಲ್ಲಿ ಜೇಬುಗಳ್ಳತನ: ಮೂವರು ಆರೋಪಿಗಳ ಬಂಧನ

Update: 2019-04-15 22:51 IST

ಬೆಂಗಳೂರು, ಎ.15: ಬಿಎಂಟಿಸಿ ಬಸ್‌ಗಳ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಜೇಬುಗಳ್ಳತನ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸುವಲ್ಲಿ ವೈಟ್‌ಫೀಲ್ಡ್ ವಿಭಾಗದ ಮಾರತ್ತಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಗೋರಿ ಪಾಳ್ಯದ ಅಕ್ಮಲ್(51), ಪಾದರಾಯನಪುರ ನಿವಾಸಿ ಫೈಝಾನ್(25) ಹಾಗೂ ಅಸ್ಲಾಂ ಪಾಷ ಎಂಬುವರು ಬಂಧಿತ ಆರೋಪಿಗಳೆಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅಸ್ಲಾಂ ಪಾಷಾ ಎಂಬಾತ ಜೆಜೆ ನಗರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾನೆ. ಈತ ತನ್ನ ಪುತ್ರ ಅಫ್ಜಲ್ ಹಾಗೂ ಅಕ್ಮಲ್, ಫೈಝಾನ್ ಎಂಬುವರನ್ನು ಸೇರಿಸಿ ಗುಂಪು ಕಟ್ಟಿಕೊಂಡು ಪ್ರತಿದಿನ ಔಟರ್ ರಿಂಗ್ ರಸ್ತೆಯ ಮಾರ್ಗವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡುವ ನೆಪದಲ್ಲಿ ಜೇಬುಗಳ್ಳತನ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತರು ಬರೋಬ್ಬರಿ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇವರಿಂದ 6 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 22 ಮೊಬೈಲ್, 113 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಅಬ್ದುಲ್ ಅಹದ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News