ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಬೆಂಬಲಿಸಲು ಬ್ರಾಹ್ಮಣ ಸಮುದಾಯದ ತೀರ್ಮಾನ

Update: 2019-04-15 17:44 GMT
ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಎ.15: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಟಿಕೆಟ್ ನೀಡುವಲ್ಲಿ ಆದ ಗೊಂದಲದ ಮೂಲಕ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿರುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಬ್ರಾಹ್ಮಣ ಸಮದಾಯದ ಮುಖಂಡ ಸುದರ್ಶನ್ ಪ್ರಕಟಿಸಿದ್ದಾರೆ.

ಸೋಮವಾರ ನಗರದ ಪದ್ಮನಾಭನಗರದ ಬನಗಿರಿ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ್ದ ಬ್ರಾಹ್ಮಣರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ಮಾತನಾಡಿದ ಮುರಳಿ, ಮೋದಿ ಅವರಿಗಿಂತಲೂ ಮುಂಚಿನಿಂದ ಬಿಜೆಪಿಯಲ್ಲಿ ಇದ್ದವರು ಅನಂತಕುಮಾರ್. ಅವರ ಪತ್ನಿ ಹಾಗೂ ಬ್ರಾಹ್ಮಣ ಮಹಿಳೆಗೆ ತುಂಬಾ ಅವಮಾನ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಅವರಿಗೆ ಬೆಂಬಲ ನೀಡಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ತಿಳಿಸಿದರು.

ಸುದರ್ಶನ್ ಹಾಗೂ ಮುರಳಿ, ಶಂಕರ ಶಾಸ್ತ್ರಿ ಅವರು ಉತ್ತಮ ಭರವಸೆಗಳನ್ನು ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ನಿರ್ಧರಿಸಿರುವುದಾಗಿ ಶೀಲಾ ಪ್ರಭಾಕರ್ ಹೇಳಿದರು. ಸಭೆಯಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆದರೆ, ಅದನ್ನು ಸರಿಪಡಿಸುವಲ್ಲಿ ಯಶಸ್ವಿಯಾದ ವಿಪ್ರ ಮುಖಂಡರು ಒಮ್ಮತದಿಂದ ಹರಿಪ್ರಸಾದ್ ಅವರನ್ನು ಬೆಂಬಲಿಸುವ ನಿರ್ಧಾರ ತಗೆದುಕೊಂಡರು. ಸಭೆಯಲ್ಲಿ 500 ಕ್ಕೂ ಹೆಚ್ಚು ವಿಪ್ರರು ಪಾಲ್ಗೊಂಡಿದ್ದರು.

‘ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಸುವ ಸಂಬಂಧ ಬ್ರಾಹ್ಮಣ ಮಹಾಸಭಾ ಏರ್ಪಡಿಸಿದ್ದ ಸಭೆಯಲ್ಲಿ ಕಾರ್ಯಕರ್ತರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ರಾಹುಲ್ ಗಾಂಧಿ ಮತ್ತು ಮೋದಿ ಘೋಷಣೆ ಕೂಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿದರು’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News