ಪಿಯುಸಿ ಫಲಿತಾಂಶ: ಶೇ.76.47 ಫಲಿತಾಂಶದೊಂದಿಗೆ ಚಿಕ್ಕಮಗಳೂರಿಗೆ ರಾಜ್ಯದಲ್ಲಿ 5ನೇ ಸ್ಥಾನ

Update: 2019-04-15 17:57 GMT

ಚಿಕ್ಕಮಗಳೂರು, ಎ.15: ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ ಕೊಂಚ ಸುಧಾರಣೆ ಕಂಡಿದ್ದು, ಕಳೆದ ಸಾಲಿನಲ್ಲಿ ಶೇ.74.39ರಷ್ಟು ಫಲಿತಾಂಶದೊಂದಿಗೆ 7ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ಶೇ.76.47 ಫಲಿತಾಂಶ ಪಡೆಯುವ ಮೂಲಕ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. 

ಜಿಲ್ಲೆಯಲ್ಲಿ 8154 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6231 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 2645 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1968 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.74.14 ಫಲಿತಾಂಶ ಲಭಿಸಿದೆ. ವಾಣಿಜ್ಯಶಾಸ್ತ್ರದಲ್ಲಿ ವಿಭಾಗದಲ್ಲಿ 3260 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2550 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.78.22 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ 2249 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1720 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.76.48 ಫಲಿತಾಂಶ ಲಭಿಸಿದೆ. ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ಏಳನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. 

ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಜಿಲ್ಲೆಯೂ ಉತ್ತಮ ಫಲಿತಾಂಶ ಪಡೆದುಕೊಂಡಿದೆ. ಏಳನೇ ಸ್ಥಾನದಲ್ಲಿದ್ದ ಜಿಲ್ಲೆ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಂಡಿದ್ದ ಪರಿಣಾಮ ವಿದ್ಯಾರ್ಥಿಗಳು ಸಾಧನೆಯಲ್ಲಿ ಸುಧಾರಣೆ ಕಂಡಿದೆ.
-ದೇವರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News