ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಪ್ರತಿಭಟನೆ

Update: 2019-04-15 18:00 GMT

ಯಾದಗಿರಿ, ಎ.15: ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿದ ಅಪಮಾನ ಮಾಡಿದ ಘಟನೆ ನಡೆದಿದೆ. ರವಿವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಇದರಿಂದ ಆಕ್ರೋಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಹಾಪುರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಲಾಗುವುದು ಎಂದು ಭರವಸೆಯನ್ನು ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News