ಮತದಾರರ ಪಟ್ಟಿಯಿಂದ ಹೆಸರು ಬಿಟ್ಟು ಹೋದ ವಿಚಾರ: ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2019-04-15 18:03 GMT

ಬೆಂಗಳೂರು, ಎ.15: ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳು ಬಿಟ್ಟುಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ಸಮರ್ಪಣ ಸೇರಿ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಸೇರಿ ಇನ್ನಿತರ ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಹತ್ತಿರವಿದ್ದಾಗ ಮತದಾರರ ಪಟ್ಟಿಯಿಂದ ಮತದಾರರನ್ನು ಕೈಬಿಟ್ಟಿದ್ದಾರೆ. ಇದರಿಂದ, ಮತದಾರರು ಮತ ಚಲಾಯಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಅರ್ಜಿದಾರರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಭಾರತೀಯ ಚುನಾವಣೆ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಗ್ರಾಮಾಂತರ ರಿಜಿಸ್ಟ್ರಾರ್ ಚುನಾವಣಾಧಿಕಾರಿಯನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News