ಬಿಲ್ಲವರಿಗೆ ಟಿಕೆಟ್ ನೀಡದಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ಗೆ ರಾಜೀನಾಮೆ: ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ

Update: 2019-04-16 07:57 GMT

ಮಂಗಳೂರು, ಎ.16: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದ.ಕ. ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಲ್ಲವರಿಗೆ ಸ್ಪರ್ಧಿಸಲು ಟಿಕೆಟ್ ನೀಡದೆ ಅನ್ಯಾಯ ಎಸಗಿರುವುದನ್ನು ಪ್ರತಿಭಟಿಸಿ ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು 1980ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೆ. ಈವರೆಗೆ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿದ್ದೆ. ಕಾರ್ಪೊರೇಟರ್ ಆಗಿದ್ದಲ್ಲದೆ, ಮಂಗಳೂರು ಮನಪಾ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷನೂ ಆಗಿದ್ದೆ. ಕಾಂಗ್ರೆಸ್ ಅವಿಭಜಿತ ದ.ಕ.ಜಿಲ್ಲೆಯ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಬಿಲ್ಲವರಿಗೆ ಟಿಕೆಟ್ ನೀಡುತ್ತಲೇ ಇತ್ತು. ಆದರೆ ಈ ಬಾರಿ ಕಾಂಗ್ರೆಸ್ ಆ ಅವಕಾಶ ನೀಡದಿರುವುದು ಖಂಡನೀಯ. ಸ್ವಾಭಿಮಾನಿ ಬಿಲ್ಲವರನ್ನು ಅದರಲ್ಲೂ ಕೋಟಿ-ಚೆನ್ನಯರು, ಕಾಂತಬಾರೆ-ಬೂದಬಾರೆ ಎಂಬ ಪುಣ್ಯಪುರಷರಿಗೆ ಅವಮಾನಿಸಿರುವುದಕ್ಕೆ ಇದು ಸಾಕ್ಷಿಯಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾಗಿ ಮತ ಚಲಾಯಿಸಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News