ಮತದಾನ ಕೇಂದ್ರಲ್ಲಿ ಮೊಬೈಲ್ ನಿಷೇಧ

Update: 2019-04-16 14:38 GMT

ಮಂಗಳೂರು, ಎ.16: ಲೋಕಸಭಾ ಸಾರ್ವತ್ರಿಕ ಚುನಾವಣೆ- 2019ರ ಹಿನ್ನೆಲೆಯಲ್ಲಿ ಎಪ್ರಿಲ್ 18ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮತದಾನ ನಡೆಯಲಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಮಾಡಲು ಮತದಾನ ಕೇಂದ್ರಗಳಿಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಪತ್ರಿಕಾಗೋಷ್ಟಿುಲ್ಲಿಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲೂ ಈ ವಿಷಯ ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಪಿಆರ್‌ಒ ಮಾತ್ರ ಮೊಬೈಲ್‌ನ್ನು ಮತದಾನ ಕೇಂದ್ರದಲ್ಲಿ ಇಟ್ಟುಕೊಳ್ಳಲು ಅವಕಾಶವಿದ್ದು ಇತರರಿಗೆ ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News