ಮೋದಿ ವಿರುದ್ದ ವೈಯಕ್ತಿಕ ಹೇಳಿಕೆ: ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾರಿಗೆ ಚು.ಆಯೋಗ ನೋಟಿಸ್

Update: 2019-04-16 17:37 GMT

ಧಾರವಾಡ, ಎ.16: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವೈಯಕ್ತಿಕ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದೆ.

ಹುಬ್ಬಳ್ಳಿಯಲ್ಲಿ ಎ.11ರಂದು ನಡೆದ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾರ್ಗರೆಟ್ ಅಳ್ವಾ ಅವರು, ಪ್ರಧಾನಿ ನರೇಂದ್ರ ಮೋದಿ ಸಪ್ತಪದಿ ತುಳಿದು ಮದುವೆಯಾದ ಪತ್ನಿಯನ್ನೆ ಕಾಯಲಿಲ್ಲ. ಇನ್ನು ದೇಶ ಕಾಯುವರೇ ಎಂದು ಪ್ರಶ್ನಿಸಿದ್ದರು.

ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಮೇರಿಗೆ ಸೂಕ್ತ ಕ್ರಮ ಜರುಗಿಸುವಂತೆ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಅದರ ಅನ್ವಯ ಮಾರ್ಗೆರೆಟ್ ಆಳ್ವಾರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News