×
Ad

ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ: ರಘುಪತಿ ಭಟ್ ವಿರುದ್ಧ ಪ್ರಕರಣ

Update: 2019-04-17 19:34 IST

ಉಡುಪಿ, ಎ. 17: ಚುನಾವಣಾ ಆಯೋಗ ಅನುಮತಿ ಪಡೆಯದೆ ಅಕ್ರಮ ಕೂಟ ಸೇರಿ ಕೋಡಿಬೆಂಗ್ರೆಯಿಂದ ಗುಜ್ಜರಬೆಟ್ಟುವರೆಗೆ ಪಾದಯಾತ್ರೆ ಹಾಗೂ ಅದರಲ್ಲಿ ಮಕ್ಕಳನ್ನು ಬಳಸಿಕೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರವಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಇತರರು ಚುನಾವಣಾ ಆಯೋಗದಿಂದ ಯಾವುದೇ ಅನುಮತಿ ಪಡೆದುಕೊಳ್ಳದೆ ಎ.15ರಂದು ಸಂಜೆ ವೇಳೆ ಪಾದಯಾತ್ರೆ ನಡೆಸಿದ್ದು, ಇದರಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೆ ಪ್ರಚಾರ ಸಭೆ ನಡೆಸುವ ಮೂಲಕ ನೀತಿ ಸಂಹಿತೆ ಯನ್ನು ಉಲ್ಲಂಘಿಸಲಾಗಿದೆ ಎಂದು ಫ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿ ಮೋಹನ್ ರಾಜ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News