×
Ad

ಟಿಪ್ಪರ್ ಗೆ ಕಾರು ಢಿಕ್ಕಿ: ಮಹಿಳೆ ಮೃತ್ಯು

Update: 2019-04-17 20:09 IST

ಮಂಡ್ಯ, ಎ.17: ಟಿಪ್ಪರ್ ಗೆ ಹಿಂಭಾಗದಿಂದ ಓಮ್ನಿ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಮಹಿಳೆ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲು ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಲತಮಾಡು ಗ್ರಾಮದ ಅಣ್ಣಯ್ಯ ಎಂಬುವರ ಪತ್ನಿ ಆಶಾ (50) ಮೃತರು. ಅಣ್ಣಯ್ಯ, ಮಕ್ಕಳಾದ ವಿನೀತ್ (24) ಹಾಗೂ ದೀಕ್ಷಿತ್ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಮೈಸೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸ್ಥಳದಲ್ಲಿದ್ದ ಜನತೆ ಕಾರಿನಿಂದ ಗಾಯಾಳುಗಳನ್ನು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News