ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆಗೆ ನಿಷೇಧ
Update: 2019-04-17 20:29 IST
ಉಡುಪಿ, ಎ.17: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎ.23 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬರುವುದರಿಂದ, ಎ. 23ರಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎ. 21ರಂದು ಸಂಜೆ 6 ಗಂಟೆಯಿಂದ ಎ.23ರ ರಾತ್ರಿ 12 ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.