ಉಡುಪಿ: ಮಹಾವೀರ ಜಯಂತಿ ಆಚರಣೆ
Update: 2019-04-17 20:33 IST
ಉಡುಪಿ, ಎ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಎಸ್ಪಿಕುಮಾರಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಹಾಗೂ ಜೈನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.