ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.60 ಲಕ್ಷ ನಗದು ವಶ

Update: 2019-04-17 18:40 GMT
ಸಾಂದರ್ಭಿಕ ಚಿತ್ರ

ಮಂಡ್ಯ, ಎ.17: ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಕದಬಹಳ್ಳಿ ಚೆಕ್‍ಪೋಸ್ಟ್ ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2,60,500 ರೂ.ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡು ಸೂಕ್ತ ದಾಖಲೆ ನೀಡುವಂತೆ ನೊಟೀಸ್ ನೀಡಿದ್ದಾರೆಂದು ತಿಳಿದು ಬಂದಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News