ಮತಗಟ್ಟೆ ಅಧಿಕಾರಿ ಹೃದಯಾಘಾತದಿಂದ ಸಾವು

Update: 2019-04-18 12:56 GMT

ಚಾಮರಾಜನಗರ, ಎ.18: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದು ಮತಗಟ್ಟೆ ಅಧಿಕಾರಿ ಸಾವಿಗೀಡಾಗಿರುವ ಘಟನೆ ಇಂದು ಚಾಮರಾಜನಗರದಲ್ಲಿ ನಡೆದಿದೆ. 

ಲೋಕಸಭಾ ಚುನಾವಣೆಯಯಲ್ಲಿ ಚಾ.ನಗರ ಪಟ್ಟಣದ ಅರಣ್ಯ ಇಲಾಖೆ ಕಟ್ಟಡದ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿಯಾಗಿದ್ದ ಹನೂರು ಜಿ.ವಿ.ಗೌಡ ಕಾಲೇಜಿನ ಪ್ರಾಂಶುಪಾಲ ಶಾಂತಮುರ್ತಿ(53) ಮೃತಪಟ್ಟವರು. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳು ಹಾಗು ಅಪಾರ ಬಂಧುಬಳಗವನ್ನು ಆಗಲಿದ್ದಾರೆ. ಅಂತ್ಯಕ್ರಿಯೆ ನಾಳೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. 

ಹನೂರು ತಾಲೂಕು ಘಟಕದ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಶಾಂತಮುರ್ತಿ, ಜನಾನುರಾಗಿ ಶಿಕ್ಷಕರಾಗಿದ್ದರು. ಕೊಳ್ಳೇಗಾಲ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಇಂದು ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಬೆಳಗ್ಗೆ  ಕರ್ತವ್ಯದಲ್ಲಿದ್ದಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. 

ಸಂತಾಪ: ಹನೂರು ಜಿ.ವಿ.ಗೌಡ ಕಾಲೇಜಿನ ಪ್ರಾಂಶುಪಾಲ ಹಾಗು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಾಂತಮೂರ್ತಿ ಅವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಕೆ.ಆರ್.ಮಲ್ಲಿಕಾರ್ಜುನಪ್ಪ, ಮಾಜಿ ಶಾಸಕರಾದ ಪರಿಮಳಾನಾಗಪ್ಪ, ಸಿ.ಗುರುಸ್ವಾಮಿ, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದತ್ತೇಶ್, ಶರಣ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ದುಗ್ಗಟ್ಟಿ ಮಲ್ಲಿಕಾರ್ಜುನಸ್ವಾಮಿ, ತಾ.ಪಂ. ಮಾಜಿ ಸದಸ್ಯ ಉಮ್ಮತ್ತೂರು ನಾಗೇಶ್, ಮೈಮುಲ್ ಮಾಜಿ ನಿರ್ದೇಶಕ ಉದ್ದನೂರು ಪ್ರಸಾದ್, ರೈತ ಮುಖಂಡ ಹೊನ್ನೂರು ಸಿದ್ದರಾಜು, ಜೆಎಸ್‍ಎಸ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ. ಸ್ವಾಮಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ ಅನೇಕರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News