ಉಡುಪಿ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ಮತದಾನ !
Update: 2019-04-18 20:16 IST
ಉಡುಪಿ, ಎ.18: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ಬೆಂಗಳೂರಿಗೆ ತೆರಳಿ, ಸಂಜೆ ವೇಳೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹೆಬ್ಬಾಳ ಮಗಟ್ಟೆಯಲ್ಲಿ ಮತ ಚಲಾಯಿಸಿದರು.
ಬೆಳಗ್ಗೆ ಉಡುಪಿಯಲ್ಲಿದ್ದ ಇವರು, ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಮಾಡಿ ಪರ್ಯಾಯ ಪಲಿಮಾರು ಸ್ವಾಮೀಜಿಯ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ‘ನನಗೆ ಭಾರೀ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ ಬಿಜೆಪಿ 22 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅವರು ಹಿರಿಯಡ್ಕ, ಬೈಲೂರು ಸೇರಿದಂತೆ ವಿವಿಧ ಮತಗಟ್ಟೆ ಬೂತ್‌ಗಳಿಗೆ ಭೇಟಿ ನೀಡಿದರು.