ಡಿಮಸ್ಟರಿಂಗ್ ಕೇಂದ್ರದಲ್ಲಿ ಮತಯಂತ್ರಗಳು ಭದ್ರ
Update: 2019-04-18 21:30 IST
ಉಡುಪಿ, ಎ.18: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ದಾನ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತಯಂತ್ರಗಳನ್ನು ಬಿಗಿ ಭದ್ರತೆಯಲ್ಲಿ ಉಡುಪಿ ಸೈಂಟ್ ಸಿಸಿಲೀಸ್ ಶಾಲೆಯಲ್ಲಿರುವ ಡಿಮಸ್ಟರಿಂಗ್ ಕೇಂದ್ರಕ್ಕೆ ತರಲಾಯಿತು.
ತಡರಾತ್ರಿಯವರೆಗೂ ಜಿಲ್ಲೆಯ ಮೂಲೆಮೂಲೆಗಳಿಂದ ಮತಯಂತ್ರಗಳು ಕೇಂದ್ರಕ್ಕೆ ಬರುತ್ತಿದ್ದು, ಕೇಂದ್ರದ ಸುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸ ಲಾಗಿದೆ. ಚಿಕ್ಕಮಗಳೂರಿನ ಮತಯಂತ್ರಗಳು ನಾಳೆ ಆಗಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.