ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ದೂರು

Update: 2019-04-18 16:13 GMT

ಬೆಂಗಳೂರು, ಎ.18: ದೇಶಸೇವೆಗೆ ಸಂಬಂಧಿಸಿದಂತೆ ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕೆ.ರಾಮಪ್ರಸಾದ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸಚಿವರು ಮಾತನಾಡುತ್ತಾ, ದೇಶ ಸೇವೆಯಲ್ಲಿ ದಲಿತರು, ಹಿಂದುಳಿದವರು, ಮುಸ್ಲಿಮರು ಹೆಚ್ಚಾಗಿ ಪ್ರಾಣ ತ್ಯಾಗ ಮಾಡಿದ್ದಾರೆಯೆ ಹೊರತು ದೇಶಪಾಂಡೆ, ಕುಲಕರ್ಣಿ, ಜೋಶಿ ಸೇರಿದಂತೆ ಯಾವೊಬ್ಬ ಬ್ರಾಹ್ಮಣರು ಅಲ್ಲವೆಂದು ಹೇಳಿದ್ದರು.

ಈ ರೀತಿ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿರುವುದು ಚುನಾವಣೆ ಆಯೋಗ ವಿಧಿಸಿರುವ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಸಚಿವರು ಬ್ರಾಹ್ಮಣ ಸಮುದಾಯದ ಕ್ಷಮಾಪಣೆಯನ್ನು ತಕ್ಷಣ ಕೇಳಬೇಕಿದೆ ಎಂದು ಅವರು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News