ಸ್ವಗ್ರಾಮದಲ್ಲಿ ಮತ ಚಲಾಯಿಸಿದ ಡಿ.ಕೆ.ಸುರೇಶ್

Update: 2019-04-18 16:20 GMT

ಬೆಂಗಳೂರು, ಎ.18: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ. ಸುರೇಶ್‌ರವರ ಹುಟ್ಟೂರು ಕನಕಪುರದ ಸಾತನೂರಿನ ದೊಡ್ಡ ಆಲಹಳ್ಳಿಯಲ್ಲಿ ಇಂದು ಮತ ಚಲಾಯಿಸಿದರು.

ಮತದಾನದ ನಂತರ ಮಾಧ್ಯಮದವರ ಜತೆ ಮಾತನಾಡಿದ ಸುರೇಶ್, ಸತತ ಮೂರನೇ ಬಾರಿಗೆ ಆಯ್ಕೆ ಬಯಸಿರುವ ತಮ್ಮನ್ನು ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳೇ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ, ಪುತ್ರನ ಜತೆ ತಮ್ಮ ಪರವಾಗಿ ಮತ ಚಲಾಯಿಸಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ತಮಗೆ ಹೆಚ್ಚಿನ ಶಕ್ತಿ ತಂದಿದೆ. ಜತೆಗೆ ಮೈತ್ರಿ ಸರಕಾರದ ಸಾಧನೆ, ಜನಪರ ಕೆಲಸ ಕಾರ್ಯಕ್ರಮಗಳು ನೆರವಿಗೆ ಬರಲಿವೆ ಎಂದು ಆಶಯ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಮೈತ್ರಿಕೂಟಕ್ಕೆ 18 ರಿಂದ 20 ಸ್ಥಾನಗಳು ಬರಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಚುನಾವಣೆ ನಂತರ ಆಡ್ವಾಣಿ, ಮುರಳಿ ಮನೋಹರ ಜೋಷಿಯವರ ಮಾದರಿಯಲ್ಲೇ ಮೂಲೆ ಗುಂಪಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News