ಸಾಧ್ವಿ ಪ್ರಜ್ಞಾ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಿರಿ: ಕೋರ್ಟ್ ಮೆಟ್ಟಿಲೇರಿದ ಮಾಲೆಗಾಂವ್ ಸ್ಫೋಟದ ಸಂತ್ರಸ್ತ

Update: 2019-04-18 16:26 GMT

ಮುಂಬೈ, ಎ.18: ಮಾಲೆಗಾಂವ್ ಸ್ಫೋಟದಲ್ಲಿ ತನ್ನ ಪುತ್ರನನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಠಾಕೂರ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಬೇಕು ಎಂದು ಎನ್ ಐಎ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಮಧ್ಯಪ್ರದೇಶದ ಭೋಪಾಲದಿಂದ ಸಾಧ್ವಿ ಪ್ರಜ್ಞಾಗೆ ಬಿಜೆಪಿ ಟಿಕೆಟ್ ನೀಡಿದೆ.

ಆರೋಗ್ಯ ಚೆನ್ನಾಗಿಲ್ಲ ಎಂಬ ಕಾರಣ ಪ್ರಜ್ಞಾಗೆ ಜಾಮೀನು ನೀಡಲಾಗಿದೆ. ಆದರೆ ಆಕೆ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಆರೋಗ್ಯಯುತರಾಗಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ. ಭಾರೀ ಬೇಸಿಗೆಯಲ್ಲೂ ಚುನಾವಣಾ ಪ್ರಚಾರದಲ್ಲಿರುವ ಸಾಧ್ವಿ ಪ್ರಜ್ಞಾ ನ್ಯಾಯಾಲಯವನ್ನು ದಾರಿ ತಪ್ಪಿಸಿದ್ದಾರೆ ಎಂದು ಅರ್ಜಿದಾರ ನಿಸಾರ್ ಅಹ್ಮದ್ ಸೈಯದ್ ಬಿಲಾಲ್ ತಿಳಿಸಿದ್ದಾರೆ.

2008ರ ಸೆಪ್ಟಂಬರ್ 29ರಂದು ನಡೆದ ಮಾಲೆಗಾಂವ್ ಸ್ಫೋಟದಲ್ಲಿ ನಿಸಾರ್ ಅಹ್ಮದ್ ಸೈಯದ್ ಬಿಲಾಲ್ ರ ಪುತ್ರ ಸೈಯದ್ ಅಝರ್ ನಿಸಾರ್ ಅಹ್ಮದ್ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News