ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ವಿಜಯಶಂಕರ್, ಪ್ರತಾಪ್ ಸಿಂಹ ಹಕ್ಕು ಚಲಾವಣೆ

Update: 2019-04-18 17:24 GMT

ಮೈಸೂರು,ಎ.18: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಮತ್ತು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ತಮ್ಮ ಕುಟುಂಬ ಸಮೇತ ಆಗಮಿಸಿ ಪ್ರತ್ಯೇಕ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು.

ಕಾಂಗ್ರೆಸ್-ಜೆಡಿಎಸ್ ಮೈತಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಪತ್ನಿ, ಪುತ್ರ ಮತ್ತು ಪುತ್ರಿ ಜೊತೆಗೆ ಬೆಳಿಗ್ಗೆಯೇ ಆಗಮಿಸಿ, ವಿಜಯನಗರ ಮೂರನೇ ಹಂತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 108 ರಲ್ಲಿ  ಮತಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪತ್ನಿ ಅರ್ಪಿತಾ ಜೊತೆಯಲ್ಲಿ ಬೋಗಾದಿಯಲ್ಲಿರುವ ರಾಯಲ್ ಕಾಂಕ್ರೇಡ್ ಶಾಲೆಯಲ್ಲಿ ಮತ ಚಲಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News