ಹಕ್ಕು ಚಲಾವಣೆ..

Update: 2019-04-18 18:28 GMT

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ನಡೆದ ಮೊದಲ ಹಂತದಲ್ಲಿ ಮಂಡ್ಯದಲ್ಲಿ ಗರಿಷ್ಠ ಮತದಾನ ನಡೆದರೆ ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ನೀರಸ ಮತದಾನವಾಗಿದೆ. ದೇಶದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಮತ್ತು ಮೈತ್ರಿ ಅಭ್ಯರ್ಥಿಗಳ ಬೆಂಬಲಿಗರ ನಡುವಿನ ಘರ್ಷಣೆ, ಇವಿಎಂ ವೈಫಲ್ಯ, ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಗೊಂದಲಗಳನ್ನು ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಮೇ 23ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ನಡೆದಾಡಲು ಅಶಕ್ತರಾಗಿರುವ ಮೂವರು ವಯೋವೃದ್ಧೆಯರು ತಮ್ಮ ಹಕ್ಕು ಚಲಾಯಿಸಲು ಬಂಧುಗಳ ನೆರವಿನೊಂದಿಗೆ ಮಂಡ್ಯದ ಮತಗಟ್ಟೆಯೊಂದಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor