115 ಕೋಟಿ ಬೇನಾಮಿ ಆಸ್ತಿ ಆರೋಪ: ರಮೇಶ್ ಜಾರಕಿಹೊಳಿ ವಿರುದ್ಧ ಕೋರ್ಟ್‌ಗೆ ದೂರು

Update: 2019-04-19 14:31 GMT

ಬೆಂಗಳೂರು, ಎ.19: ಬೇನಾಮಿ ಆಸ್ತಿ ಸಂಬಂಧ ಮಾಜಿ ಸಚಿವ ಕಾಂಗ್ರೆಸ್‌ನ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ ಬರೋಬ್ಬರಿ 115 ಕೋಟಿ ರೂ.ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಐಟಿ ಅಧಿಕಾರಿಗಳು ಹೊಸದಿಲ್ಲಿಯ ಬೇನಾಮಿ ಆಸ್ತಿ ಟ್ರಿಬ್ಯೂನಲ್ ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ.

2017ರ ಜನವರಿ 19 ರಂದು ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಸಿಕ್ಕ ದಾಖಲೆಗಳ ಬಗ್ಗೆ ತನಿಖೆ ನಡೆಸಿ ಬೇನಾಮಿ ಸಂಪಾದನೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದರು. ಬೆಳಗಾವಿ, ಬೆಂಗಳೂರು ಹಾಗೂ ಗೋವಾದಲ್ಲಿ ಬೇನಾಮಿ ಆಸ್ತಿ ಸಂಪಾದನೆ ಮಾಡಿರುವುದು ಪತ್ತೆಯಾಗಿತ್ತು.

ಎರಡು ವರ್ಷಗಳ ಸುದೀರ್ಘ ತನಿಖೆ ನಡೆಸಿದ ಅಧಿಕಾರಿಗಳು 115 ಕೋಟಿ ಬೇನಾಮಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News