​ಮೋದಿ ಹೆಸರಿನಲ್ಲಿ ಮತಯಾಚನೆ ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ: ಕಲ್ಲಡ್ಕ ಪ್ರಭಾಕರ ಭಟ್

Update: 2019-04-20 10:32 GMT

ಮಡಿಕೇರಿ ಏ.20: ಬಿಜೆಪಿ ಅಭ್ಯರ್ಥಿಗಳು ಬರೀ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಚುನಾವಣಾ ಯಾಚನೆ ನಡೆಸುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅಷ್ಟೇನೂ ಸೂಕ್ತವಲ್ಲ ಎಂದು ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಅಭಿಪ್ರಾಯಪಟ್ಟಿದ್ದಾರೆ.

 ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರ ಸಾಧನೆ ಹೆಸರಿನಲ್ಲಿ ಮತ ಕೇಳುವುದಕ್ಕಿಂತ ಆಯಾ ಕ್ಷೇತ್ರದ ಅಭ್ಯರ್ಥಿ ತಾನು ಮಾಡಿದ, ಮಾಡಲಿರುವ ಸಾಧನೆಯನ್ನು ಹೇಳಿಕೊಂಡು ಮತ ಕೇಳುವುದು ಸೂಕ್ತ. ಮೋದಿ ಅವರ ಸಹಕಾರದಿಂದ ತಾನು ಕ್ಷೇತ್ರದ ಜನತೆಗಾಗಿ ಮಾಡಿರುವ ಸಾಧನೆ ಏನು ಎನ್ನುವುದನ್ನು ಅಭ್ಯರ್ಥಿಗಳು ಬಿಂಬಿಸಿಕೊಳ್ಳುವ ಮೂಲಕ ಮತ ಯಾಚಿಸಬೇಕು ಎಂದರು.

ಓರ್ವ ವ್ಯಕ್ತಿಯ ಸಾಧನೆಗಳನ್ನು ಬಿಂಬಿಸಿಕೊಂಡು ಮತ ಕೇಳುವುದು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ವ್ಯಕ್ತಿ ಪೂಜೆ ನಮ್ಮ ಸಂಸ್ಕತಿಯಲ್ಲ ಎಂದೂ ಪ್ರಭಾಕರ ಭಟ್ ಹೇಳಿದರು.

ಬಿಜೆಪಿಯಲ್ಲಿ ಮೋದಿ ಅವರನ್ನೇ ಮುಂದಿನ ಪ್ರಧಾನಿಯಾಗಿ ಎಲ್ಲರೂ ಒಪ್ಪಿಕೊಂಡಿದ್ದಾರೆ. ಹೀಗಾಗಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ, ಆದರೆ ಮಹಾಘಟಬಂಧನ್ ನಲ್ಲಿ ರಾಹುಲ್ ಗಾಂಧಿ, ಮಾಯಾವತಿ, ಮಮತಾ ಬ್ಯಾನರ್ಜಿ, ದೇವೇಗೌಡ ಸೇರಿದಂತೆ ಯಾರು ಪ್ರಧಾನಿ ಎಂದೇ ಬಿಂಬಿಸುತ್ತಿಲ್ಲ. ಇದು ಮಹಾಘಟಬಂಧನ್ ನಾಯಕರ ಹತಾಶೆಯನ್ನು ಪ್ರದರ್ಶಿಸುತ್ತದೆ ಎಂದೂ ಪ್ರಭಾಕರ ಭಟ್ ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News