ಅನುದಾನ ರಹಿತ ಪ.ಪೂ.ಕಾಲೇಜುಗಳ ಪ್ರಾರಂಭಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Update: 2019-04-20 15:25 GMT

ಉಡುಪಿ, ಎ.20: ರಾಜ್ಯದಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿ ಸಲು ಇಚ್ಛಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಎ.23 ಕೊನೆಯ ದಿನವಾಗಿರುತ್ತದೆ. ಕಾಲೇಜು ಕಟ್ಟಡದಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿರುವುದನ್ನು ಖಚಿತ ಪಡಿಸಿಕೊಂಡ ಬಳಿಕವೇ ಕಾಲೇಜಿಗೆ ಮಾನ್ಯತೆ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News