ಬೈಕ್‌ನಲ್ಲಿ ತೆರಳುತ್ತಿದ್ದಾಗ ಮೊಬೈಲ್ ಸ್ಫೋಟ: ತಾಯಿ-ಮಗನಿಗೆ ಗಂಭೀರ ಗಾಯ

Update: 2019-04-20 15:48 GMT

ಬೆಂಗಳೂರು, ಎ.20: ನೂತನವಾಗಿ ಖರೀದಿಸಿದ್ದ ಸ್ಮಾರ್ಟ್ ಮೊಬೈಲ್ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ತಾಯಿ-ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂದಗುಡಿ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ.

ಹೊಸಕೋಟೆ ನಿವಾಸಿ ಗಂಗಾಧರ್ ಎಂಬುವರು ತಾಯಿಯೊಂದಿಗೆ ಆಂಧ್ರಪ್ರದೇಶಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜೇಬಿನಲ್ಲಿಟ್ಟಿದ್ದ ಮೊಬೈಲ್ ನಂದಗುಡಿ ಸಮೀಪ ಏಕಾಏಕಿ ಸ್ಫೋಟಗೊಂಡಿದೆ ಎನ್ನಲಾಗಿದೆ.

ಸ್ಫೋಟ ಪರಿಣಾಮದಿಂದ ಬೈಕ್‌ನಿಂದ ತಾಯಿ-ಮಗ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.

ಈ ಸಂಬಂಧ ಮೊಬೈಲ್ ಖರೀದಿಸಿದ ಅಂಗಡಿ ಹಾಗೂ ಕಂಪೆನಿ ವಿರುದ್ಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತನಿಖೆ ನಡೆಸುವಂತೆ ಗಂಗಾಧರ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News