ಸಂಶೋಧನಾ ವರದಿ ತಯಾರಿ ಕುರಿತು ವಿಶೇಷ ಉಪನ್ಯಾಸ

Update: 2019-04-20 16:05 GMT

ಉಡುಪಿ, ಎ.20: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ಮತ್ತು ಸಮಾಜಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಸಮಾಜ ವಿಜ್ಞಾನ ಸಂಶೋಧನೆ ಯಲ್ಲಿ ವರದಿ ತಯಾರಿಕೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಹಿರಿಯ ಸಂಶೋಧಕ ಡಾ. ವೈ.ಆರ್.ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಸಮಾಜ ವಿಜ್ಞಾನದಲ್ಲಿ ಸಂಶೋಧನೆ ಗಳು ಹೆಚ್ಚೆಚ್ಚು ನಡೆದರೆ ಸಮಾಜದಲ್ಲಿನ ಸೂಕ್ಷ್ಮ ವಿಷಯಗಳನ್ನು ಬೆಳಕಿಗೆ ತರುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಸಂಶೋಧಕರು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಬೇಕು ಎಂದರು.

ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ಡಾ.ಸುರೇಶ್ ರೈ, ಸಮಾಜ ಕಾರ್ಯ ವಿಭಾಗದ ಸಂಯೋಜಕ ಡಾ.ದುಗ್ಗಪ್ಪ ಕಜೆಕಾರ್, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ರಾಘವ ನಾಯ್ಕೊ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News