ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ರ್ಯಾಲಿ

Update: 2019-04-20 16:40 GMT

ಮಂಗಳೂರು, ಎ.20: ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಿಂದ ಪಾಂಡೇಶ್ವರದ ಅಗ್ನಿಶಾಮಕ ಠಾಣೆಯ ಆವರಣದ ತನಕ ಶನಿವಾರ ರ್ಯಾಲಿ ನಡೆಯಿತು. ಜಿಲ್ಲಾ ಅಗ್ನಿಶಾಮಕ ನಿವೃತ್ತ ಅಧಿಕಾರಿ ಕೆ.ಉಮೇಶ ಹಸಿರು ನಿಶಾನೆ ತೋರಿಸಿ ರ್ಯಾಲಿಗೆ ಚಾಲನೆ ನೀಡಿದರು. 18 ವಿವಿಧ ರೀತಿಯ ಅಗ್ನಿಶಾಮಕ ವಾಹನಗಳು ರ್ಯಾಲಿಯಲ್ಲಿ ಭಾಗವಹಿಸಿದ್ದವು.

ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಶೇಖರ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಎಚ್.ಎಂ.ವಸಂತ ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ (ಅಗ್ನಿ ನಿಯಂತ್ರಣ) ಕೆ.ಪಿ.ಎಂ.ನವಾಝ್, ಅಗ್ನಿಶಾಮಕ ಠಾಣಾಧಿಕಾರಿ ಸುನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಅಗ್ನಿಶಾಮಕ ಸೇವಾ ಸಪ್ತಾಹದ ಅವಧಿಯಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕಾ ಕೇಂದ್ರಗಳು, ವಿದ್ಯಾ ಸಂಸ್ಥೆ ಸಂಸ್ಥೆಗಳು, ಮಾಲ್, ಬಹುಮಹಡಿ ಕಟ್ಟಡ, ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ಉಪನ್ಯಾಸ, ಪ್ರಾತ್ಯಕ್ಷಿಕೆ, ಅಣುಕು ಪ್ರದರ್ಶನ ಆಯೋಜಿಸಿ ಸಾರ್ವನಿಕರಲ್ಲಿ ಅಗ್ನಿ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಅಲ್ಲದೆ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News