ಅನಾರೋಗ್ಯ ಹಿನ್ನೆಲೆ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Update: 2019-04-20 17:20 GMT

ಮಂಗಳೂರು, ಎ. 20: ನಗರದ ಬಂದರು ದಕ್ಕೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೂಲತಃ ಉತ್ತರ ಪ್ರದೇಶ ನಿವಾಸಿ ರೀಮಾ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರ ಗಂಡ ಅರ್ಜುನ್ (32) ಕೂಡಾ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಅರ್ಜುನ್ ನಗರದಲ್ಲಿ ಐಸ್‌ಕ್ರೀಂ ವ್ಯಾಪಾರ ಮಾಡುತ್ತಿದ್ದರು. ಇವರ ಪತ್ನಿ ರೀಮಾ ಹಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ರಾತ್ರಿ ರೀಮಾ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭ ಬೊಬ್ಬೆ ಕೇಳಿ ಅವರ ಪತಿ ಅರ್ಜುನ್ ಕೂಡಾ ಓಡಿ ಬಂದಿದ್ದು, ಬೆಂಕಿಯಲ್ಲಿ ಉರಿಯುತ್ತಿದ್ದ ಪತ್ನಿಯನ್ನು ರಕ್ಷಿಸಲು ಹೋಗಿದ್ದಾರೆ. ಇದರಿಂದ ಅರ್ಜುನ್‌ಗೆ ಕೂಡಾ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದಾರೆ.

ಕೂಡಲೇ ಸ್ಥಳೀಯರು ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ರೀಮಾ ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಅರ್ಜುನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News