ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ಅಪಘಾತ: 7 ಮಂದಿ ಸಾವು, 30 ಜನರಿಗೆ ಗಾಯ

Update: 2019-04-21 05:22 GMT

ಲಕ್ನೋ, ಎ.21:ಪ್ರಯಾಣಿಕರನ್ನು ಹೊತ್ತು ವಾರಾಣಸಿಗೆ ಸಾಗುತ್ತಿದ್ದ ಬಸ್ ಉತ್ತರಪ್ರದೇಶ ಮೈನ್‌ಪುರಿ ಜಿಲ್ಲೆಯಲ್ಲಿ ಟ್ರಕ್‌ವೊಂದಕ್ಕೆ ಢಿಕ್ಕಿಯಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದರೆ, ಇತರ 30 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಬಸ್‌ನಿಂದ ಹೊರ ತೆಗೆಯಲು ಭಾರೀ ಪರದಾಡಬೇಕಾಯಿತು.

‘‘ಹೊಸದಿಲ್ಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಬಸ್ ಓವರ್‌ಟೇಕ್ ಮಾಡುವ ಯತ್ನದಲ್ಲಿ ಟ್ರಕ್‌ಗೆ ಹಿಂದಿನಿಂದ ಢಿಕ್ಕಿಯಾಗಿದೆ. ಘಟನೆಯು ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ಹೈವೇಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಮೃತಪಟ್ಟಿದ್ದು, ಗಾಯಗೊಂಡವರನ್ನು ಉತ್ತರಪ್ರದೇಶದ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉತ್ತರಪ್ರದೇಶದ ಕರ್ಶಲ್ ಪೊಲೀಸ್ ಠಾಣೆಯ ಅಧಿಕಾರಿ ರಾಕೇಶ್ ಪಾಂಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News