ಮಾನಸಿಕ ಸ್ಥಿಮಿತ ಕಳೆದುಕೊಂಡ ಸಿದ್ದರಾಮಯ್ಯರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದ ಶೋಭಾ
Update: 2019-04-21 17:56 IST
ಚಿಕ್ಕೋಡಿ, ಎ. 21: ಪ್ರಧಾನಿ ಮೋದಿಯವರನ್ನು ಹೀಯಾಳಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿ ತಾನು ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್‌ಗೆ ದಾಖಲಿಸಿದರೆ ಮಾತ್ರ ಮೈತ್ರಿ ಸರಕಾರ ಉಳಿಯಲಿದೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಗೆ ಬುದ್ಧಿ ಭ್ರಮಣೆಯಾಗಿದೆ. ಜಾತಿ ಹಾಗೂ ಧರ್ಮ ಒಡೆಯಲು ಪ್ರಯತ್ನ ಮಾಡಿದರು. ಇಂತಹ ವ್ಯಕ್ತಿಗಳಿಂದ ಪ್ರಧಾನಿ ಮೋದಿ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ಶೋಭಾ ಹೇಳಿದರು.