ಪತ್ನಿಯ ಕೊಲೆಗೈದ ಪತಿ

Update: 2019-04-21 14:23 GMT

ಬೆಂಗಳೂರು, ಎ.21: ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡತೇಗೂರಿನ ಮುನಿಸ್ವಾಮಪ್ಪ ಕಟ್ಟಡದಲ್ಲಿ ವಾಸವಾಗಿದ್ದ ಪ್ರಿಯಾಂಕಾ(24) ಕೊಲೆಯಾಗಿರುವ ಗಾರ್ಮೆಂಟ್ಸ್ ಉದ್ಯೋಗಿ ಎಂದು ತಿಳಿದುಬಂದಿದೆ.

ಏಳು ವರ್ಷಗಳ ಹಿಂದೆ ರಮೇಶ್‌ಬಾಬು ಎಂಬಾತನೊಂದಿಗೆ ಪ್ರಿಯಾಂಕಾ ವಿವಾಹವಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ರಮೇಶ್ ಬಾಬು ಮತ್ತು ಪ್ರಿಯಾಂಕಾಗೂ ಕೌಟುಂಬಿಕ ವಿಷಯದಲ್ಲಿ ಪ್ರತಿದಿನ ಜಗಳ ನಡೆಯುತ್ತಿತ್ತು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಶನಿವಾರ ರಾತ್ರಿ ದಂಪತಿ ನಡುವೆ ಜಗಳ ನಡೆದಿದ್ದು, ರಮೇಶ್ ಬಾಬು ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News