ಸಾಹಿತಿ ದಾಸೇಗೌಡ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ

Update: 2019-04-21 14:24 GMT
ಡಾ.ಜಿ.ವಿ.ದಾಸೇಗೌಡ

ಬೆಂಗಳೂರು, ಎ. 21: ಹಿರಿಯ ಜಾನಪದ ವಿದ್ವಾಂಸ ಹಾಗೂ ಸಾಹಿತಿ ಡಾ.ಜಿ.ವಿ.ದಾಸೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾನಪದ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಜಿ.ವಿ.ದಾಸೇಗೌಡ ಅವರು ಬಹುಭಾಷಾ ಪಂಡಿತರಾಗಿದ್ದರು ಎಂದು ಸ್ಮರಿಸಿರುವ ಕುಮಾರಸ್ವಾಮಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News