ದಾವಣಗೆರೆ ಲೋಕಸಭಾ ಕ್ಷೇತ್ರ: ಬಿಜೆಪಿ, ಮೈತ್ರಿ ಪಕ್ಷದಿಂದ ರೋಡ್ ಶೋ

Update: 2019-04-21 17:12 GMT

ದಾವಣಗೆರೆ,ಎ.21: ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಚಾರ ಕಣ ಅಂತಿಮ ಕ್ಷಣಗಳಲ್ಲಿ ರಂಗೇರಿದ್ದು, ರವಿವಾರ ಎಲ್ಲಾ ಪಕ್ಷಗಳಿಂದ ರೋಡ್ ಶೋ ನಡೆದು, ಸಂಜೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತು.

ಕಳೆದೊಂದು ತಿಂಗಳಿಂದ ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿಗಳ ಪರವಾಗಿ ಸ್ಟಾರ್ ಪ್ರಚಾರಕರು ಸೇರಿದಂತೆ ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಚಿವರು, ಹಿರಿಯ ಮುಖಂಡರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿದ್ದಾರೆ. ಎ.23 ಕ್ಕೆ ಮತದಾನ ನಡೆಯಲಿದ್ದು ಮತದಾರನ ಅಂಕಿತದಿಂದ ಯಾರಿಗೆ ಜಯಲಭಿಸಲಿದೆ ಎಂಬ ಕುತೂಹಲ ಎಲ್ಲೆಡೆ ಮೂಡಿದೆ.

ಬಿಜೆಪಿಯಿಂದ ಬೃಹತ್ ರೋಡ್ ಶೋ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್ ಪರ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ರೋಡ್ ಶೋ ನಡೆಸಿದರು. ಬಿಜೆಪಿ ರ‍್ಯಾಲಿಯಲ್ಲಿ ಜಿಲ್ಲಾಧ್ಯಕ್ಷ ಯಶವಂತರಾವ್, ಶಾಸಕರುಗಳಾದ ಎಸ್.ಎ ರವೀಂದ್ರನಾಥ್, ಪ್ರೋ.ಲಿಂಗಣ್ಣ, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.

ಮೈತ್ರಿ ಅಭ್ಯರ್ಥಿ ಪರ ರೋಡ್ ಶೋ: ದಾವಣಗೆರೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಪರವಾಗಿ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಪ್ರಚಾರ ನಡೆಸಿದರು.

ಮೈತ್ರಿ ಅಭ್ಯರ್ಥಿಪರ ಪ್ರಚಾರದ ರೋಡ್ ಶೋನಲ್ಲಿ ಲೋಕಸಭಾ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ, ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್, ಹೆಚ್.ಕೆ ರಾಮಚಂದ್ರಪ್ಪ,ಗಣೇಶ್ ದಾಸಕರಿಯಪ್ಪ, ಆರ್.ಹೆಚ್ ಶೇಖರಪ್ಪ, ನಾಗಭೂಷಣ್ ಮತ್ತಿತರರಿದ್ದರು. ಅದೇ ರೀತಿ ವಿವಿಧ ಪಕ್ಷಗಳ, ಪಕ್ಷೇತರ ಅಭ್ಯರ್ಥಿಗಳು ಸಹ ಕೊನೆಯ ಪ್ರಚಾರ ಸಭೆ, ರ‍್ಯಾಲಿ ನಡೆಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News