ಜೈಲು ನಿವಾಸಿಗಳ ದೈಹಿಕ, ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Update: 2019-04-21 17:26 GMT

ಮಂಗಳೂರು, ಎ.21: ಭಾರತೀಯ ರೆಡ್‌ಕ್ರಾಸ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಿಲ್ಲಾ ಕಾರಾಗೃಹ, ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆ, ದ.ಕ. ಜಿಲ್ಲಾ ಆರೋಗ್ಯ ಇಲಾಖೆ, ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡಮಿ ದೇರಳಕಟ್ಟೆ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಜೈಲು ನಿವಾಸಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದ.ಕ. ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಕಡ್ಲೂರು ಸತ್ಯ ನಾರಾಯಣಾಚಾರ್ಯ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯದಿಂದ ಇಡೀ ಸಮಾಜದ ಸ್ವಾಸ್ಥ ಕಾಪಾಡಲು ಸಾಧ್ಯ. ಈ ಹಿನ್ನೆಲೆಯಿಂದ ಜೈಲು ನಿವಾಸಿಗರ ದೈಹಿಕ ಹಾಗೂ ಮಾನಸಿಕ ಆರೋಗ್ಯ ತಪಾಸಣೆಯ ಶ್ರಮ ಶ್ಲಾಘನೀಯ ಎಂದು ಹೇಳಿದರು.

ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿದರು. ನಿಟ್ಟೆ ವಿಶ್ವವಿದ್ಯಾನಿಲಯದ ವೈಸ್‌ಚಾನ್ಸ್‌ಲರ್ ಹಾಗೂ ರೆಡ್‌ಕ್ರಾಸ್ ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆಯ ಸಮಿತಿಯ ಅಧ್ಯಕ್ಷ ಡಾ. ಸತೀಶ್ ಭಂಡಾರಿ, ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿಯ ಅಧ್ಯಕ್ಷ ಯತೀಶ್ ಬೈಕಂಪಾಡಿ, ಸಾರ್ವಜನಿಕ ಸಂಪರ್ಕ ಸಮಿತಿ ಅಧ್ಯಕ್ಷ ಬಿ. ರವೀಂದ್ರ ಶೆಟ್ಟಿ, ಪ್ರವೀಣ್ ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮಾ ಸ್ವಾಗತಿಸಿದರು. ದ.ಕ. ಜಿಲ್ಲಾ ಕಾರಾಗೃಹದ ಸುಪರಿಂಡೆಂಟ್ ಚಂದನ್ ಜೆ. ಪಾಟೇಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News