ಮಂಗಳೂರು ವಿವಿ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ವಾರ್ಷಿಕೋತ್ಸವ

Update: 2019-04-22 14:52 GMT

ಮಂಗಳೂರು, ಎ. 22: ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ವಾರ್ಷಿಕೋತ್ಸವ ಕಾರ್ಯಕ್ರಮವು ಕಾಲೇಜಿನ ರವೀಂದ್ರ ಕಲಾಭವನ ಸಂಕೀರ್ಣದಲ್ಲಿ ಸೋಮವಾರ ಜರುಗಿತು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಎ.ಸಿದ್ದೀಕ್ ವಾರ್ಷಿಕ ವರದಿ ವಾಚಿಸಿದರು. ಈ ಸಂದರ್ಭ ಸ್ನಾತಕೋತ್ತರ ವಿಭಾಗಗಳ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಂಗಳೂರು ವಿವಿ ಪರೀಕ್ಷೆಯಲ್ಲಿ ಎಂ.ಎ. ಹಿಂದಿ ವಿಭಾಗದ ಪ್ರಥಮ ರ್ಯಾಂಕ್ ಪಡೆದ ಅನುಶ್ರೀ, ಯೋಗ ವಿಜ್ಞಾನದ ಪ್ರಥಮ ರ್ಯಾಂಕ್ ಪಡೆದ ಡಾ. ಸೌಮ್ಯಾ ನಿಲೇಶ್ ಕೊಟ್ಯಾನ್, ತೃತೀಯ ರ್ಯಾಂಕ್ ಪಡೆದ ಗುಟ್ಟಿ ಜಯಾ ಭಾರತಿ ಅವರನ್ನು ಸನ್ಮಾನಿಸಲಾಯಿತು.

ಪ್ರಸ್ತುತ ವರ್ಷ ಎನ್.ಇ.ಟಿ/ಕೆ-ಸೆಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಕೂಡಾ ಸನ್ಮಾನಿಸಲಾಯಿತು. ಸ್ನಾತಕೋತ್ತರ ರಸಾಯನಶಾಸ್ತ್ರ ಭಾಗದ ಸಂಯೋಜಕ ಡಾ. ಲಕ್ಷ್ಮಣ್, ಯೋಗ ವಿಜ್ಞಾನದ ಸಂಯೋಜಕ ದಯಾಕರ್ ಉಪಸ್ಥಿತರಿದ್ದರು.

ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಡಾ.ಜಯವಂತ ನಾಯಕ್ ಸ್ವಾಗತಿಸಿದರು. ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್ ವಂದಿಸಿದರು. ಶಹಲಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News