ಕುಡಿಯುವ ನೀರು ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ: ಉಡುಪಿ ಡಿಸಿ ಸೂಚನೆ

Update: 2019-04-22 16:19 GMT

ಉಡುಪಿ, ಎ.22: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಕಾರ್ಯ ಪ್ರವೃತ್ತರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಸೋಮವಾರ ಈ ಸಂಬಂಧ ಮಣಿಪಾಲದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ನೀರು ಪೂರೈಕೆ ಆಗುವಂತೆ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ಸಾರ್ವಜನಿಕರ ಬೇಡಿಕೆಗೆ ತಕ್ಷಣವೇ ಸ್ಪಂದಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷವನ್ನು ಗಂಭೀರವಾಗಿ ಪರಿಗಣಿಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಗ್ರಾಮಪಂಚಾಯತ್, ಹಾಸ್ಟೆಲ್, ಸರಕಾರಿ ಕಟ್ಟಡ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸುವ ಬಗ್ಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಪಂ ಮುಖ್ಯ ಯೋಜನಾಧಿ ಕಾರಿ ಶ್ರೀನಿವಾಸ ರಾವ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News