ಮಾಜಿ ಸಚಿವ ರಾಮದಾಸ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೋರ್ಟ್

Update: 2019-04-22 16:25 GMT

ಬೆಂಗಳೂರು, ಎ.22: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ರಾಮದಾಸ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯ ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣ ರದ್ದು ಕೋರಿ ರಾಮದಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಧೀಶ ರಾಮಚಂದ್ರ ಡಿ. ಹುದ್ದಾರ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು.

ಕಳೆದ ಲೋಕಸಭಾ ಚುನಾವಣೆ ವೇಳೆ ರಾಮದಾಸ್ ಅವರು ಸೋನಿಯಾ ಗಾಂಧಿ ತಂದೆ ಇಟಲಿ ದೇಶದ ಸೈನ್ಯದಲ್ಲಿದ್ದರು. ಅವರು ಸೈನ್ಯದ ರಹಸ್ಯಗಳನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಮಗಳು ಸೋನಿಯಾ ಎಂದು ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವೈಯಕ್ತಿಕ ನಿಂದನೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಲೆಕ್ಷನ್ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ರಾಮದಾಸ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನ್ಯಾಯಪೀಠವು ವಕೀಲರ ವಾದ ಪ್ರತಿ ವಾದ ಆಲಿಸಿ ಸಾಕ್ಷಿಗಳ ಕೊರತೆಯ ಹಿನ್ನೆಯಲ್ಲಿ ರಾಮದಾಸ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News